HomeKarnatakaಮುಖಮಂತ್ರಿಗಳಿಂದ ಉತ್ತರ ಕರ್ನಾಟಕ ಪ್ರವಾಸ: ಜೀವನದಿ ಕೃಷ್ಣೆಗೆ ಬಾಗಿನ ಅರ್ಪಣೆ

ಮುಖಮಂತ್ರಿಗಳಿಂದ ಉತ್ತರ ಕರ್ನಾಟಕ ಪ್ರವಾಸ: ಜೀವನದಿ ಕೃಷ್ಣೆಗೆ ಬಾಗಿನ ಅರ್ಪಣೆ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದು ಅಲ್ಲಿನ ಕೋವಿಡ್ ಸ್ಥಿತಿಗತಿ ಹಾಗು ಪ್ರವಾಹದಿಂದ ಆದ ಹಾನಿ ಪರಿಶೀಲನೆ ಕಾರ್ಯದಲ್ಲಿ ದಿನವಿಡೀ ತೊಡಗಿಸಿಕೊಂಡರು.

ಬೆಳಗಾವಿ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಮಾನ್ಯ ಮುಖ್ಯಮಂತ್ರಿಗಳು ಕೋವಿಡ್ ಹಾಗು ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಿದರು. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಹಾಗು ಸಂಭಾವ್ಯ 3ನೇ ಅಲೆ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಪಡೆದುಕೊಂಡರು. ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ ಮುಂತಾದವರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಬಾಗಿನ ಅರ್ಪಿಸಿದರು. ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಇದು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಬೊಮ್ಮಾಯಿಯವರು ಅರ್ಪಿಸಿದ ಮೊದಲ ಬಾಗಿನವಾಗಿದೆ. ಈ ಸಂದರ್ಭ ಮುಖ್ಯಮಂತ್ರಿಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಸಿಸಿ ಪಾಟೀಲ್ ಹಾಗು ಸಂಸದ ಪಿಸಿ ಗದ್ದಿಗೌಡರ್ ಸಾಥ್ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments