HomeKarnatakaಬೆಳಗಾವಿ ಪಾಲಿಕೆ ಬಿಜೆಪಿ ತೆಕ್ಕೆಗೆ: ಹುಬ್ಬಳ್ಳಿಯಲ್ಲಿ ಬಿಜೆಪಿ ಮೇಲುಗೈ, ಕಲಬುರ್ಗಿ ಅತಂತ್ರ

ಬೆಳಗಾವಿ ಪಾಲಿಕೆ ಬಿಜೆಪಿ ತೆಕ್ಕೆಗೆ: ಹುಬ್ಬಳ್ಳಿಯಲ್ಲಿ ಬಿಜೆಪಿ ಮೇಲುಗೈ, ಕಲಬುರ್ಗಿ ಅತಂತ್ರ

ಬೆಳಗಾವಿ: ರಾಜ್ಯದ ಮೂರು ಮಹಾ ನಗರಪಾಲಿಕೆಗಳ ಚುನಾವಣಾ ಮತ ಎಣಿಕೆ ಬಹುತೇಕ ಮುಗಿದಿದ್ದು ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಇತರರ ಬೆಂಬಲ ಪಡೆದು ಅಧಿಕಾರಕ್ಕೆ ಏರುವ ತಯಾರಿಯಲ್ಲಿದೆ. ಆದರೆ ಕಲಬುರ್ಗಿ ಪಾಲಿಕೆಯಲ್ಲಿ ಅತಂತ್ರ ಸ್ಥಿತಿ ತಲೆದೋರಿದೆ.

ಬೆಳಗಾವಿ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಅಲ್ಲಿ ಬಿಜೆಪಿ ಗದ್ದುಗೆ ಹಿಡಿಯುತ್ತಿದೆ. ಮರಾಠಿ ಕೂಟಕ್ಕೆ ಭಾರೀ ಹಿನ್ನಡೆಯಾಗಿದೆ. ಪಾಲಿಕೆಯ ಒಟ್ಟು 58 ಕ್ಷೇತ್ರಗಳ ಪೈಕಿ 35ರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ 10, ಎಂಇಎಸ್ 2 ಹಾಗು ಇತರರು 11 ವಾರ್ಡ್’ಗಳಲ್ಲಿ ಜಯ ಸಾಧಿಸಿದ್ದಾರೆ.

ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ 39 ಸ್ಥಾನಗಳೊಂದಿಗೆ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಕಾಂಗ್ರೆಸ್ 33 ಸೀಟು ಗೆದ್ದುಕೊಂಡು ಸನಿಹದಲ್ಲಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಅಧಿಕಾರಕ್ಕೆ 42 ಸದಸ್ಯರ ಬೆಂಬಲ ಬೇಕಿದೆ. 39 ಸ್ಥಾನ ಗೆದ್ದಿರುವ ಬಿಜೆಪಿ ಪಕ್ಷೇತರ ಸದಸ್ಯರ ನೆರವು ಪಡೆದು ಅಧಿಕಾರಕ್ಕೆ ಏರಲು ತಯಾರಿ ನಡೆಸಿದೆ.

ಕಲಬುರ್ಗಿಯಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದು ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ 26, ಬಿಜೆಪಿ 23 ಸ್ಥಾನ ಗೆದ್ದಿದೆ. ಮೂವರು ಜೆಡಿಸ್ ಹಾಗು ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಬಿಜೆಪಿ ಜೆಡಿಎಸ್ ಹಾಗು ಪಕ್ಷೇತರರ ಬೆಂಬಲ ಪಡೆಯಲು ಪ್ರಯತ್ನಿಸುತ್ತಿದ್ದು ಬಿಜೆಪಿ ಪ್ರಭಾರಿ ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತಂತ್ರಗಾರಿಕೆಯಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments