HomeKarnatakaಕರ್ನಾಟಕ ಉಪಚುನಾವಣೆ: ಮೂರು ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು ಶುರು

ಕರ್ನಾಟಕ ಉಪಚುನಾವಣೆ: ಮೂರು ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು ಶುರು

ಬೆಂಗಳೂರು: ರಾಜ್ಯದ ಹಣಗಳ ಹಾಗು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದ್ದು ಮೂರೂ ಪಕ್ಷಗಳು ಅಭ್ಯರ್ಥಿ ಆಯ್ಕೆಯ ಕಸರತ್ತಿನಲ್ಲಿ ತೊಡಗಿವೆ. ಎರಡೂ ಕ್ಷೇತ್ರಗಳು ಶಾಸಕರ ನಿಧನದಿಂದ ತೆರವಾಗಿದೆ. ಒಕ್ಟೋಬರ್ 30ರಂದು ಈ ಎರಡೂ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಹಾನಗಲ್ ಕ್ಷೇತ್ರ ಬಿಜೆಪಿಯ ಸಿ.ಎಂ ಉದಾಸಿ ಅವರ ನಿಧನದಿಂದ ಹಾಗು ಸಿಧಾಂಗಿ ಕ್ಷೇತ್ರ ಜೆಡಿಎಸ್ ನ ಎಂ.ಸಿ. ಮನಗೂಳಿ ಅವರ ನಿಧನದಿಂದ ತೆರವಾಗಿದೆ. ಆಯಾಯ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಬಿಜೆಪಿ ಹಾಗು ಜೆಡಿಎಸ್ ಕಾರ್ಯತಂತ್ರ ಆರಂಭಿಸಿದ್ದರೆ, ಕಾಂಗ್ರೆಸ್ ಖಾತೆ ತೆರೆಯುವ ಉಮ್ಮಸ್ಸಿನಲ್ಲಿದೆ.

ಬಿಜೆಪಿಗೆ ಹಾನಗಲ್ ಕ್ಷೇತ್ರದಲ್ಲಿ ಸರಿಯಾದ ಅಭ್ಯರ್ಥಿ ಇಲ್ಲ. ಸಿ.ಎಂ ಉದಾಸಿ ಪುತ್ರ ಶಿವಕುಮಾರ್ ಉದಾಸಿ ಲೋಕಸಭಾ ಸದಸ್ಯರಾಗಿರುವ ಕರಣ ಅವರನ್ನು ಶಾಸಕ ಸ್ಥಾನಕ್ಕೆ ಕಣಕ್ಕಿಳಿಸುವುದು ಅನುಮಾನ. ಕಾಂಗ್ರೆಸ್ ಪಕ್ಷದಲ್ಲಿ ಈ ಹಿಂದೆ 2018ರಲ್ಲಿ ಪರಾಭವಗೊಂಡಿದ್ದ ಶ್ರೀನಿವಾಸ ಮಾನೆಗೆ ಟಿಕೆಟ್ ದೊರೆಯುವ ಸಂಭವವಿದೆ. ಜತೆಗೆ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ಈಗಾಗಲೇ ನಯಾಜ್ ಅನ್ನುವವರನ್ನು ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಿಸಿದೆ.

ಸಿಂಧಗಿಯಲ್ಲಿ ನಿಧನರಾದ ಶಾಸಕ ಮನಗೂಳಿ ಪುತ್ರ ಅಶೋಕ್ ಮನಗೂಳಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಈಗಾಗಿ ಕಾಂಗ್ರೆಸ್ಸಿನಿಂದ ಅಶೋಕ್ ಮನಗೂಳಿಯೇ ಅಭ್ಯರ್ಥಿಯಾಗಲಿದ್ದಾರೆ. ಪಕ್ಷ ಕೂಡ ಇದನ್ನು ದೃಢಪಡಿಸಿದೆ. ಬಿಜೆಪಿಯಿಂದ ಕಳೆದ ಬಾರಿ ಸೋತ ರಾಜಶೇಖರ್ ಭೂಸನೂರುಮಠ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸುವುದಾಗಿ ಹೇಳಿಕೊಂಡಿದ್ದು ಎರಡೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments