
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇಂದು ಬರೋಬ್ಬರಿ 25,005 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. 8 ಮಂದಿ ಇಂದು ಕೊರೋನಾದಿಂದ ಸಾವಿಗೀಡಾಗಿದ್ದಾರೆ.
ಬೆಂಗಳೂರಲ್ಲಿ ರಾಜ್ಯದಲ್ಲೇ ಅತೀ ಹೆಚ್ಚಿನ 18,374 ಹೊಸ ಪ್ರಕರಣಗಳು ಇಂದು ಒಂದೇ ದಿನದಲ್ಲಿ ದಾಖಲಾಗಿದ್ದು ಆತಂಕ ಸೃಷ್ಟಿಸಿದೆ. ಇಂಡಿಯನ್ ಕೊರೋನಾ ಅಂಶಗಳ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ರಾಜ್ಯದ ಪಾಸಿಟಿವಿಟಿ ದರ 12.39 ಶೇಕಡಾದಷ್ಟಿದೆ ಎಂದು ಹೇಳಿದ್ದಾರೆ.
ಇಂದು ಒಟ್ಟು 2 ಲಕ್ಷ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 1,15,733 ಸಕ್ರಿಯ ಕೊರೋನಾ ಪ್ರಕರಣಗಳಿದ್ದು ಬೆಂಗಳೂರು ಒಂದರಲ್ಲಿ 91 ಸಾವಿರ ಪ್ರಕರಣಗಳು ಸಕ್ರಿಯವಾಗಿವೆ.












































