HomeNationalಕಾಂಗ್ರೆಸ್ ಸರಣಿ ಸೋಲು: ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರುಗಳ ರಾಜೀನಾಮೆ ಕೇಳಿದ ಸೋನಿಯಾ ಗಾಂಧಿ

ಕಾಂಗ್ರೆಸ್ ಸರಣಿ ಸೋಲು: ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರುಗಳ ರಾಜೀನಾಮೆ ಕೇಳಿದ ಸೋನಿಯಾ ಗಾಂಧಿ

ದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ನಂತರ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಅಧ್ಯಕ್ಷರುಗಳನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ.

ಉತ್ತರಾಖಂಡ ಕಾಂಗ್ರೆಸ್ ಮುಖ್ಯಸ್ಥ ಗಣೇಶ್ ಗೋಡಿಯಾಲ್ ಮತ್ತು ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್ ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಮತ್ತು ಮಣಿಪುರ ಕಾಂಗ್ರೆಸ್ ಮುಖ್ಯಸ್ಥ ನಾಮೀರಕ್ ಪಂ ಲೋಕೇನ್ ಸಿಂಗ್ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಕಾರಣ ರಾಜೀನಾಮೆ ನೀಡುವ ಎಲ್ಲಾ ಸಾಧ್ಯತೆಗಳಿದೆ. ಇದೀಗ ಖುದ್ದಾಗಿ ಸೋನಿಯಾ ಗಾಂಧಿಯವರೇ ರಾಜೀನಾಮೆ ಕೇಳಿರುವುದರಿಂದ ಒಂದೆರಡು ದಿನಗಳ ಒಳಗಾಗಿ ರಾಜೀನಾಮೆ ಸಲ್ಲಿಸಬಹುದಾಗಿದೆ.

ಈ ಕುರಿತು ಟ್ವಿಟ್ಟರ್‌ ನಲ್ಲಿ ಕಾಂಗ್ರೆಸ್ ಮುಖಂಡ ಸುರ್ಜೆವಾಲಾ, “ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರು ನೂತನ ಸಂಘಟನೆ ರಚಿಸುವ ಸಲುವಾಗಿ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗು ಮಣಿಪುರ ಪಿಸಿಸಿ ಅಧ್ಯಕ್ಷರ ರಾಜೀನಾಮೆ ಕೇಳಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಐದು ರಾಜ್ಯಗಳಾದ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಪಂಜಾಬ್ ಮತ್ತು ಮಣಿಪುರದಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಆತ್ಮಾವಲೋಕನಕ್ಕಾಗಿ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯ ನಂತರ ಈ ನಿರ್ಧಾರ ಹೊರಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments