
ಬಳ್ಳಾರಿ: ಹಿಜಾಬ್ ನಿಷೇಧಿಸಿದ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ 10 ಮುಸ್ಲಿಂ ವಿದ್ಯಾರ್ಥಿನಿಯರು ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಗೆ ಗೈರಾಗಿದ್ದರು. ಪರೀಕ್ಷೆಗಿಂತಲೂ ಹಿಜಾಬ್ ಮೇಲು ಎಂದು ಆ 10 ಮಂದಿ ಮೊದಲ ದಿನದ ಕನ್ನಡ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.
ಆ 10 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಳ್ಳಾರಿ ಪೂರ್ವ ಬ್ಲಾಕ್ನಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು. ಆದರೆ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿದ ಕಾರಣ, ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ವಾಪಸ್ ಮನೆಗೆ ತೆರಳಿದ್ದಾರೆ.
ವಿದ್ಯಾರ್ಥಿಗಳ ತಲೆಯಲ್ಲಿ ವಿದ್ಯೆಯ ಬದಲು ಧರ್ಮಾಂಧತೆ ತುಂಬಿಸಿ ತನ್ನ ಸಮಾಜವನ್ನು ಎತ್ತ ಕೊಂಡೊಯ್ಯಲು ಯೋಜಿಸುತ್ತಿದೆ ಆ ಒಂದು ಕೋಮು ಎಂದು ಯೋಚಿಸುವಂತಾಗಿದೆ.












































