HomeKarnatakaಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು: ಸಚಿವ ಸಂಪುಟ ಅಸ್ತು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು: ಸಚಿವ ಸಂಪುಟ ಅಸ್ತು

ಶಿವಮೊಗ್ಗ: ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡಲು ಕರ್ನಾಟಕ ರಾಜ್ಯ ಸಚಿವ ಸಂಪುಟ ಅಷ್ಟು ಎಂದಿದೆ. ರಾಜ್ಯ ಸಚಿವ ಸಂಪುಟದ ಅನುಮೋದನೆಯನ್ನು ಅನುಮತಿಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಮಾನ ನಿಲ್ದಾಣ ಕಾರ್ಯಾರಂಭಕ್ಕೂ ಮೊದಲು ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಲಿದೆ. ಡಿಸೆಂಬರ್ ನಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗುವುದರೊಳಗೆ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು, ರಾತ್ರಿ ಲ್ಯಾನ್ಡಿಂಗ್ ಸೌಕರ್ಯ ಕೂಡ ಇರಲಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಬುಧವಾರ ಸಂಜೆ ಶಿವಮೊಗ್ಗದ ವಿಮಾನ ನಿಲ್ದಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments