HomeNationalದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ದಿಢೀರ್ ರಾಜೀನಾಮೆ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ದಿಢೀರ್ ರಾಜೀನಾಮೆ

ನವದೆಹಲಿ: ದಿಢೀರ್ ಬೆಳವಣಿಗೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿಂದಿನ ದೆಹಲಿ ಲೆಫ್ಟಿನೆಂಟ್ ಗವರ್ನರ್ ಕೂಡ ಹಠಾತ್ ರಾಜೀನಾಮೆ ನೀಡಿದ್ದು ಇಲ್ಲಿ ಉಲ್ಲೇಖನೀಯ.

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ನಜೀಬ್ ಜಂಗ್ ಅವರು ಕೂಡ 2016ರಲ್ಲಿ ಹಠಾತ್ ರಾಜೀನಾಮೆ ನೀಡಿದ್ದರು. ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಬೈಜಲ್ ಅವರು ಡಿಸೆಂಬರ್ 31, 2021ಕ್ಕೆ ಐದು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ್ದರು.

ಅನಿಲ್ ಬೈಜಲ್ 1969 ರ ಬ್ಯಾಚ್‌ನ ಕೇಂದ್ರಾಡಳಿತ ಪ್ರದೇಶದ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿ, ಪ್ರಸಾರ ಭಾರತಿ ಮತ್ತು ಇಂಡಿಯನ್ ಏರ್‌ಲೈನ್ಸ್‌ ಮುಂತಾದ ಸಾರ್ವಜನಿಕ ವಲಯದ ಕಂಪನಿಗಳ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments