HomeCoastalಭಾರೀ ಮಳೆ: ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜಿಗೆ ರಜೆ

ಭಾರೀ ಮಳೆ: ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜಿಗೆ ರಜೆ

ಉಡುಪಿ: ಸತತವಾಗಿ ೩ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಹಾಗು ಶುಕ್ರವಾರವೂ (ಮೇ ೨೦) ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮೇ ೨೦ರಂದು ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ. ಶುಕ್ರವಾರ ಕೂಡ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವುದರಿಂದ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಳೆಯೂ ಇನ್ನೂ ಒಂದೆರಡು ದಿನ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments