
ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ಕೋವಿಡ್ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಗಂಟಲು ಸೋಂಕು ಮತ್ತು ಇಎನ್‌ಟಿ ತಜ್ಞರು ಸೋನಿಯಾ ಗಾಂಧಿಯವರನ್ನು ಪರೀಕ್ಷಿಸುತ್ತಿದ್ದಾರೆ.
ಆಸ್ಪತ್ರೆಯ ಮೂಲಗಳ ಪ್ರಕಾರ ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ನಿಗಾದಲ್ಲಿ ಇಡಲಾಗುವುದು ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಮಾಧ್ಯಮದವರಿಗೆ ತಿಳಿಸಿದ್ದಾರೆ.
“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ ಕಾರಣದಿಂದಾಗಿ ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರ ಬಗೆಗಿನ ಕಾಳಜಿ ಮತ್ತು ಶುಭ ಹಾರೈಕೆಗಳಿಗಾಗಿ ನಾವು ಎಲ್ಲಾ ಕಾರ್ಯಕರ್ತರಿಗೆ ಹಾಗು ಹಿತೈಷಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.












































