HomeKarnatakaಕೊನೆಗೂ ಲೋಕಾಯುಕ್ತರನ್ನು ನೇಮಿಸಿದ ಸರ್ಕಾರ: ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್‌

ಕೊನೆಗೂ ಲೋಕಾಯುಕ್ತರನ್ನು ನೇಮಿಸಿದ ಸರ್ಕಾರ: ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್‌

ಬೆಂಗಳೂರು: ಕರ್ನಾಟಕ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಮಂಗಳವಾರ ಅಂಕಿತ ಹಾಕಿದ್ದಾರೆ. ಬಿಎಸ್ ಪಾಟೀಲ್‌ ಇಂದು ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಿಂದಿನ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಆ ಬಳಿಕ ಲೋಕಾಯುಕ್ತ ಹುದ್ದೆ ಖಾಲಿ ಉಳಿದಿತ್ತು.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments