HomeKarnatakaರಾಜಕೀಯ ಬಿಡುತ್ತೇನೆಯೇ ಹೊರತು ಮಂಡ್ಯ ಜನರನ್ನ ಬಿಡುವುದಿಲ್ಲ: ವಿರೋಧಿಗಳಿಗೆ ಸಂಸದೆ ಸುಮಲತಾ ಟಾಂಗ್

ರಾಜಕೀಯ ಬಿಡುತ್ತೇನೆಯೇ ಹೊರತು ಮಂಡ್ಯ ಜನರನ್ನ ಬಿಡುವುದಿಲ್ಲ: ವಿರೋಧಿಗಳಿಗೆ ಸಂಸದೆ ಸುಮಲತಾ ಟಾಂಗ್

ಮಂಡ್ಯ: “ನಾನು ಮಂಡ್ಯ ಬಿಟ್ಟು ಹೋಗುತ್ತೇನೆ ಎಂದು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ನಾನು ರಾಜಕೀಯ ಬಿಡುತ್ತೇನೆಯೇ ಹೊರತು ಮಂಡ್ಯವನ್ನಲ್ಲ” ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಈ ಮೂಲಕ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

“ರಾಜಕೀಯ ಬಿಟ್ಟರೂ ನಾನು ಮಂಡ್ಯ ಬಿಡಲ್ಲ. ಹೊಸ ಕ್ಷೇತ್ರ ಹುಡುಕ್ತಿರೋದು ಯಾರಾ ಕನಸು ಅಂತಾ ಗೊತ್ತಿಲ್ಲ. ಒಂದಷ್ಟು ಜನರು‌ ಕನಸು ಕಾಣ್ತಿದ್ದಾರೆ. ನಾನು ರಾಜಕೀಯಕ್ಕೆ ಬಂದಿರೋದೆ ಮಂಡ್ಯಕ್ಕೋಸ್ಕರ. ರಾಜಕೀಯದಿಂದ ಏನೇನೋ ಆಗ್ಲಿಕ್ಕೆ ಬಂದಿಲ್ಲ. ರಾಜಕೀಯ ಬೇಕಿದ್ರೆ ಇಂದು‌ ಇರ್ತೀನಿ, ನಾಳೆ ಬಿಡ್ತೀನಿ.. ಆದ್ರೆ ಮಂಡ್ಯ ಬಿಡಲ್ಲ. ಕನಸು ಕಾಣುವವರು ಕನಸಿಗೆ ನೀರು ಚೆಲ್ಲಿದ ಹಾಗೇನೆ” ಎಂದು ಇಂದು ಮದ್ದೂರಿನಲ್ಲಿ ಸಂಸದೆ ಸುಮಲತಾ ಅವರು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ನಾನು ಯಾರಿಗೆ ಬೆಂಬಲ ಕೊಡಬೇಕು ಅನ್ನೋದನ್ನ ಮುಂದೆ ನೋಡೋಣ. ಇನ್ನು ಯಾರು ಅಭ್ಯರ್ಥಿಗಳು ಅನ್ನೋದು ಗೊತ್ತಾಗಿಲ್ಲವಲ್ಲ. ಈಗಲೇ ನಾನು ಯಾರಿಗೆ ಅಂತ ಬೆಂಬಲ ಸೂಚಿಸಲಿ. ನನ್ನ ಪರವಾಗಿ ನಿಂತು ಎಲ್ಲರೂ ಹೋರಾಟ ಮಾಡಿದ್ದಾರೆ. ಯಾರಿಗೂ ಕೂಡ ನೋಯಿಸಬಾರದು ಅಲ್ವಾ ಎನ್ನುವ ಮೂಲಕ ಸುಮಲತಾ ಅವರು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಯಾರಿಗೂ ಬೆಂಬಲ ನೀಡದೆ ತಟಸ್ಛ ನಿಲುವು ತಾಳುವ ಸೂಚನೆ ನೀಡಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments