HomeNationalಚೀನಾದಲ್ಲಿ ಮತ್ತೆ ಕೋವಿಡ್ ಅವಾಂತರ: ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ: ಲಕ್ಷಾಂತರ ಮಂದಿ ಸಾವು!

ಚೀನಾದಲ್ಲಿ ಮತ್ತೆ ಕೋವಿಡ್ ಅವಾಂತರ: ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ: ಲಕ್ಷಾಂತರ ಮಂದಿ ಸಾವು!

ಬೀಜಿಂಗ್: ಎಲ್ಲೆಡೆ ಕೋವಿಡ್ ಪ್ರಕರಣಗಳು ಇಳಿದು ಜನಜೀವನ ಸಾಮಾನ್ಯವಾಗಿರುವ ಮಧ್ಯೆಯೇ ಚೀನಾದಲ್ಲಿ ಕೋವಿಡ್ ಪ್ರಕರಣಗಳು ಮಾತ್ರ ಏರುಗತಿಯಲ್ಲಿದೆ. ಈ ಹಿಂದಿನ ಸಂಖ್ಯೆಗಿಂತಲೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿದ್ದು ಲಕ್ಷಾಂತರ ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ಚೀನಾ ಸರ್ಕಾರ ಕಠಿಣ ಲಾಕ್ ಡೌನ್ ನಿರ್ಬಂಧಗಳನ್ನು ವಿಧಿಸಿ ನಂತರ ಜನರ ತೀವ್ರ ವಿರೋಧದ ಬಳಿಕ ನಿರ್ಬಂಧವನ್ನು ವಾಪಸು ಪಡೆದಿತ್ತು. ಇದೀಗ ಅಲ್ಲಿ ಕೋವಿಡ್-19 ಪ್ರಕರಣಗಳು ಏರುಮುಖದತ್ತ ಸಾಗುತ್ತಿದೆ.

ಕೋವಿಡ್ ಪ್ರಕರಣಗಳು ಏರುತ್ತಿದ್ದಂತೆ ಅಲ್ಲಿನ ಆಸ್ಪತ್ರೆಯಲ್ಲಿ ಜಾಗವೇ ಇಲ್ಲದಾಗಿದೆ. ಹಾಗಾಗಿ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ. ಚೀನಾ ಆಸ್ಪತ್ರೆಗಳ ಶವಾಗಾರಗಳಲ್ಲಿ ಕೋವಿಡ್-19 ಸಾವುಗಳ ಪ್ರಕರಣಗಳನ್ನು ನಿಭಾಯಿಸುವುದಕ್ಕಾಗಿ ಅಲ್ಲಿನ ಸಿಬ್ಬಂದಿಗಳು ಹೆಚ್ಚಿನ ಸಮಯ ಕಾರ್ಯನಿರ್ವಹಿಸಬೇಕಾಗುತ್ತಿದೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments