HomeNationalಪಾಕ್ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: 47 ಮಂದಿ ಸಾವು, 150ಕ್ಕೂ ಅಧಿಕ ಮಂದಿಗೆ ಗಾಯ

ಪಾಕ್ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: 47 ಮಂದಿ ಸಾವು, 150ಕ್ಕೂ ಅಧಿಕ ಮಂದಿಗೆ ಗಾಯ

ಪೇಶಾವರ: ಪಾಕಿಸ್ತಾನದ ಪೇಷಾವರದಲ್ಲಿನ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯಲ್ಲಿ ಇಂದು (ಸೋಮವಾರ) ನಡೆದ ಪ್ರಬಲ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ 47 ಮಂದಿ ಸಾವಿಗೀಡಾಗಿದ್ದು, 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮಸೀದಿಯಲ್ಲಿ ನಮಾಜ್ ಮಾಡುವ ಸಂದರ್ಭ ಆತ್ಮಹತ್ಯಾ ದಾಳಿಕೋರ ಮುಂದಿನ ಸಾಲಿನಲ್ಲಿದ್ದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಸ್ಫೋಟದಲ್ಲಿ ಗಾಯಗೊಂಡಿರುವವರ ಪೈಕಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇವೆ. ಗಾಯಾಳುಗಳನ್ನು ಸ್ಥಳೀಯ ಪೇಶಾವರ ಲೇಡಿ ರೀಡಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ 10ಕ್ಕೂ ಹೆಚ್ಚು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಆತ್ಮಾಹುತಿ ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು ದಾಳಿಯ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments