ಬೆಂಗಳೂರು: ಬಿ. ವೈ. ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಹೊರ ಹುರುಪು ಬಂದಂತಿದ್ದು ಇದೀಗ ರಾಜ್ಯ ಸಮಿತಿಗೆ ಪದಾಧಿಕಾರಿಗಳನ್ನು ಅಂತಿಮಗೊಳಿಸಲಾಗಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಕಾರ್ಕಳದ ಸುನಿಲ್ ಕುಮಾರ್ ಅವರಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ಒಲಿದು ಬಂದಿದ್ದು, ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ರಾಜ್ಯ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿದೆ.

ರಾಜ್ಯ ಉಪಾಧ್ಯಕ್ಷರಾಗಿ ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ರಾಜುಗೌಡ ನಾಯಕ್, ಎನ್ ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ಶ್ರೀಮತಿ ರೂಪಾಲಿ ನಾಯಕ್, ಡಾ. ಬಸವರಾಜ ಕೆಲಗಾರ, ಶ್ರೀಮತಿ ಮಾಳವಿಕಾ ಅವಿನಾಶ್, ಎಂ ರಾಜೇಂದ್ರ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಸುನಿಲ್ ಕುಮಾರ್ ಕಾರ್ಕಳ, ಪ್ರೀತಮ್ ಗೌಡ ಹಾಸನ, ಪಿ ರಾಜೀವ್, ನಂದೀಶ್ ರೆಡ್ಡಿ ಅವರುಗಳಿಗೆ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿದ್ದು, ರಾಜ್ಯ ಕಾರ್ಯದರ್ಶಿಗಳಾಗಿ ಶೈಲೇಂದ್ರ ಬೆಲ್ದಾಳೆ, ಡಿ ಎಸ್ ಅರುಣ್, ಬಸವರಾಜ ಮತ್ತಿಮೊಡ್, ಸಿ ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಕುಮಾರಿ ಲಲಿತ ಅನಾಪುರ, ಡಾ ಲಕ್ಷ್ಮಿ ಅಶ್ವಿನ್ ಗೌಡ ಮತ್ತಿ ಶೀಮತಿ ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಿಸಲಾಗಿದೆ. ಸುಬ್ಬನರಸಿಂಹ ಅವರನ್ನು ರಾಜ್ಯ ಖಜಾಂಜಿಯಾಗಿ ನೇಮಿಸಿ ಆದೇಶಿಸಲಾಗಿದೆ.
ನಮ್ಮ ವಾಟ್ಸಾಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/CMUDdTXoFVn7atm3zHYGrd












































