
ಟೋಕಿಯೋ: ಟೋಕಿಯೊದ ಹನೆಡಾ ವಿಮಾನ ನಿಲ್ದಾಣ ರನ್ ವೇ ಅಲ್ಲಿ ಜಪಾನ್ ಏರ್‌ಲೈನ್ಸ್ ವಿಮಾನವೊಂದು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅವಘಡ ಸಂಭವಿಸಿದ ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ರನ್‌ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ರನ್ ವೇ ಅಲ್ಲಿದ್ದ ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿಯಾಗಿ ಜಪಾನ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ವಿಮಾನದಲ್ಲಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅದರಿಂದಾಗಿ ಭಾರೀ ಅನಾಹುತವೊಂದು ತಪ್ಪಿಹೋಗಿದೆ.












































