HomeKarnatakaಕರ ಸೇವಕ ಶ್ರೀಕಾಂತ್ ಪೂಜಾರಿ ಬಂಧನ: ರಾಜ್ಯಪಾಲರಿಗೆ ದೂರು ನೀಡಿದ ರಾಜ್ಯ ಬಿಜೆಪಿ ನಿಯೋಗ

ಕರ ಸೇವಕ ಶ್ರೀಕಾಂತ್ ಪೂಜಾರಿ ಬಂಧನ: ರಾಜ್ಯಪಾಲರಿಗೆ ದೂರು ನೀಡಿದ ರಾಜ್ಯ ಬಿಜೆಪಿ ನಿಯೋಗ

ಬೆಂಗಳೂರು: 31 ವರ್ಷದ ಹಿಂದೆ ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಬುಧವಾರ ತೀವ್ರ ಹೋರಾಟ ನಡೆಸಿತು. ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಪಾಲರನ್ನು ಭೇಟಿಯಾಗಿ ಈ ಬಗ್ಗೆ ದೂರು ಸಲ್ಲಿಸಿದೆ.

ಮೊದಲು ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ಬಿಜೆಪಿ ನಾಯಕರು ಆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿದರು.

ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅವರನ್ನು ಭೇಟಿಯಾಗಿ, 31 ವರ್ಷದ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ​ ರಾಮ ಮಂದಿರ ಉದ್ಘಾಟನೆ ಸಂದರ್ಭ ಉದ್ದೇಶಪೂರ್ವಕವಾಗಿ ಇದೀಗ ಕೆಲವರನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ”ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ಕುರಿತು ನಾವು ರಾಜ್ಯಪಾಲರಿಗೆ ವಿವರ ನೀಡಿದ್ದೇವೆ. ತಕ್ಷಣ ರಾಜ್ಯ ಸರ್ಕಾರದಿಂದ ವಿವರವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಇಂದು ರಾಮಜಪ ನಡೆಯುತ್ತಿದೆ. ಜನವರಿ 22 ರಂದು ಲೋಕಾರ್ಪಣೆಯಾಗಲಿರುವ ರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾತರತೆಯ ವಾತಾವರಣವನ್ನು ನೋಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ ನಡವಳಿಕೆ, ಸಿಎಂ, ಕಾಂಗ್ರೆಸ್ ಸರ್ಕಾರದ ನಡವಳಿಕೆ ಅನುಮಾನ ತರಿಸುತ್ತಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments