HomeMovieನಟ ಯಶ್ ಬರ್ತಡೇ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು: ಕುಟುಂಬಕ್ಕೆ 2 ಲಕ್ಷ...

ನಟ ಯಶ್ ಬರ್ತಡೇ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು: ಕುಟುಂಬಕ್ಕೆ 2 ಲಕ್ಷ ಪರಿಹಾರ

ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳು ದಾರುಣವಾಗಿ ಸಾವಿಗೀಡಾಗಿದ್ದಾರೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಯಶ್ ಅಭಿಮಾನಿಗಳಾದ ಸೂರಣಗಿ ಗ್ರಾಮದ ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಸೇರಿ ಒಟ್ಟು ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ನಟ ಯಶ್​ ಅವರ ಹುಟ್ಟುಹಬ್ಬ ಹಿನ್ನಲೆ ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಮೂವರು ಯುವಕರು ಸಾವಿಗೀಡಾಗಿದ್ದಾರೆ. ಈಗ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

ಮೃತ ಯುವಕರ ಕುಟುಂಬದವರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ನಡೆಸುವವರಾಗಿದ್ದಾರೆ. ಅವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.

ನಮ್ಮ ವಾಟ್ಸಾಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/CMUDdTXoFVn7atm3zHYGrd

RELATED ARTICLES

ಪ್ರಮುಖ ಸುದ್ದಿಗಳು

Recent Comments