HomeKarnatakaರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಹೋಗದೆ ಇರುವ ನಿರ್ಧಾರ ಸರಿಯಾಗಿದೆ. ಇದಕ್ಕೆ ನನ್ನ ಬೆಂಬಲವಿದೆ: ಸಿಎಂ ಸಿದ್ದರಾಮಯ್ಯ

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಹೋಗದೆ ಇರುವ ನಿರ್ಧಾರ ಸರಿಯಾಗಿದೆ. ಇದಕ್ಕೆ ನನ್ನ ಬೆಂಬಲವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಘೋಷಿಸಿರುವ ಮಧ್ಯೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಕ್ರಮವನ್ನು ಸ್ವಾಗತಿಸಿದ್ದಾರೆ. ಪಕ್ಷದ ನಾಯಕರುಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ರಾಮ ಮಂದಿರ ಉದ್ಘಾಟನೆ ಬಿಜೆಪಿ ಹಾಗು ಆರೆಸ್ಸೆಸ್ ಕಾರ್ಯಕ್ರಮ ಎಂದು ಟೀಕಿಸಿದ ಕಾಂಗ್ರೆಸ್ ಹೈಕಮಾಂಡ್ ಮಂದಿರ ಉದ್ಘಾಟನೆಗೆ ಹೋಗುವುದಿಲ್ಲ ಎಂದು ತನ್ನ ನಿರ್ಧಾರ ಪ್ರಕಟಿಸಿತ್ತು. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ” ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ” ಎಂದು ಹೇಳಿದ್ದಾರೆ.

ಇನ್ನೂ ಕೂಡ ಕಾಮಗಾರಿ ಪೂರ್ಣವಾಗದೆ ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆ ಖಂಡನೀಯ. ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಮಾತನಾಡುವ ಬಿಜೆಪಿ ಮತ್ತು ಆರ್.ಎಸ್‌.ಎಸ್ ನಾಯಕರು ಈ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೊಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

“ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ ಎಂದು ಕರ್ನಾಟಕ ಸಿಎಂ ಹೇಳಿದ್ದಾರೆ.

ನಮ್ಮ ವಾಟ್ಸಾಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/CMUDdTXoFVn7atm3zHYGrd

RELATED ARTICLES

ಪ್ರಮುಖ ಸುದ್ದಿಗಳು

Recent Comments