
ಬೆಂಗಳೂರು: 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರ ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತೋಷ ಹಂಚಿಕೊಂಡಿದ್ದಾರೆ.
01.04.2006ರ ಪೂರ್ವ ಮತ್ತು ತದನಂತರ ರಾಜ್ಯ ಸರ್ಕಾರಿ ನೌಕರರು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದ್ರೆ ಜೂನ್ 30ರೊಳಗೆ ನಿಗದಿತ ನಮೂನೆಯನ್ನು ಭರ್ತಿ ಮಾಡಬೇಕು. ಒಂದು ಬಾರಿ ಮಾಡಿಕೊಂಡ ಆಯ್ಕೆ ಬದಲಾಯಿಸಲು ಸಾಧ್ಯವಿಲ್ಲ.
ಒಂದು ವೇಳೆ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ. ನಿಗದಿತ ನಮೂನೆಯನ್ನು ಭರ್ತಿ ಮಾಡಿದ ಬಳಿಕ ಜುಲೈ 31ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಸಲ್ಲಿಸಬೇಕು. ಇಲಾಖಾ ಮುಖ್ಯಸ್ಥರು ಆಗಸ್ಟ್ 31ರೊಳಗೆ ಆರ್ಥಿಕ ಇಲಾಖೆಯ ನುಮೋದನೆಗಾಗಿ ಸಲ್ಲಿಸತಕ್ಕದ್ದು.
” 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ” ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.












































