HomePoliticalನಿತೀಶ್ ಯೂಟರ್ನ್: ಜ.28ಕ್ಕೆ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ...

ನಿತೀಶ್ ಯೂಟರ್ನ್: ಜ.28ಕ್ಕೆ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸಾಧ್ಯತೆ

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಗೆ ಬಿಹಾರ ಸಾಕ್ಷಿಯಾಗಲಿದ್ದು ಬಿಜೆಪಿಯೇತರ ಮೈತ್ರಿಕೂಟದ ರಚನೆಗೆ ಭಾರೀ ಒತ್ತು ನೀಡಿದ್ದ ನಿತೀಶ್ ಕುಮಾರ್ ಕಾಂಗ್ರೆಸ್ ಕೂಟದಿಂದ ಹೊರಬಂದು ಮತ್ತೆ ಬಿಜೆಪಿ ಪಾಳಯ ಸೇರುವ ಸಾಧ್ಯತೆ ದಟ್ಟವಾಗಿದೆ. ಜನವರಿ 28 ರಂದು ಬಿಹಾರ ಜನತಾ ದಳ ಮತ್ತು ಬಿಜೆಪಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಪ್ರಸ್ತುತ ಲಾಲು ಯಾದವ್ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಬಹುದು ಎನ್ನಲಾಗಿದೆ. ನಿತೀಶ್ ಕುಮಾರ್ ಮತ್ತೊಮ್ಮೆ ಭಾರತೀಯ ಜನತಾ ಪಕ್ಷದೊಂದಿಗೆ ಸರ್ಕಾರ ರಚಿಸಬಹುದು. ಉಪಮುಖ್ಯಮಂತ್ರಿಯಾಗಿ ಬಿಜೆಪಿಯ ಸುಶೀಲ್ ಮೋದಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ರಾಜಕೀಯ ಸ್ಥಾನಪಲ್ಲಟದ ಸೂಚನೆ ಸಿಕ್ಕಿದೆ.

ಬಿಜೆಪಿಗೆ 2 ಉಪಮುಖ್ಯಮಂತ್ರಿ ಸ್ಥಾನಗಳನ್ನು ನೀಡುವ ಸಾಧ್ಯತೆ ಇದ್ದು ನಿತೀಶ್ ಕುಮಾರ್ ಉಳಿದ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಯಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪ. ನಡ್ಡಾ ಸೇರಿದಂತೆ ಕೆಲವು ಪ್ರಮುಖರು ಭಾಗಿಯಾಗಿದ್ದು ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆದಿದೆ. ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಇನ್ನು ಸ್ಪಷ್ಟ ಚಿತ್ರಣ ಸಿಕ್ಕಿಲ್ಲ.

RELATED ARTICLES

ಪ್ರಮುಖ ಸುದ್ದಿಗಳು

Recent Comments