HomeKarnatakaರಾಜ್ಯಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ಸಿನ ನಾಸಿರ್ ಹುಸೇನ್ ಗೆಲುವು: ವಿಧಾನಸೌಧದಲ್ಲಿ ಮೊಳಗಿತು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ

ರಾಜ್ಯಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ಸಿನ ನಾಸಿರ್ ಹುಸೇನ್ ಗೆಲುವು: ವಿಧಾನಸೌಧದಲ್ಲಿ ಮೊಳಗಿತು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು, ಬಿಜೆಪಿಯ ಓರ್ವ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಈ ನಡುವೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ರಾಜ್ಯದ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಮೂಲಕ ಭಾರತದಲ್ಲಿರುವ ಮುಸ್ಲಿಂಮರ ದೇಶಭಕ್ತಿಯ ಬಗ್ಗೆ ಮತ್ತೆ ಪ್ರಶ್ನೆ ಏಳುವಂತಾಗಿದೆ. ಮಾಧ್ಯಮಗಳ ಸಮ್ಮುಖದಲ್ಲಿಯೇ ಪಾಕ್ ಜಿಂದಾಬಾದ್ ಘೋಷಣೆ ಕೂಗಿದ್ದರಿಂದ ಆ ವೀಡಿಯೋ ವೈರಲ್ ಆಗತೊಡಗಿವೆ.

ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾಗ ಆತನ ಹಿಂದೆ ನಿಂತಿದ್ದ ಯುವಕ 2 ಬಾರಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಈ ಬಗ್ಗೆ ಮಾಧ್ಯಮದವರು ನಾಸಿರ್ ಹುಸೇನನನ್ನು ಪ್ರಶ್ನೆ ಮಾಡುತ್ತಿದ್ದಂತೆಯೇ ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಮಾಧ್ಯಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೂಡ ನಡೆದಿದೆ. ಪ್ರಶ್ನೆ ಕೇಳಿದ ಮಾಧ್ಯಮದ ಮಂದಿಯನ್ನು “ಹೇ ನಡೆಯೋ ಹೋಗೋ ಯಾವನೋ ಅವನು” ಎಂದು ರಿಯಾಕ್ಟ್ ಮಾಡಿದ್ದಾನೆ. ಈ ಮೂಲಕ ಮುಸ್ಲಿಂ ಮೂಲಭೂತವಾದಿತನ ಹಾಗು ದೇಶ ವಿರೋಧಿ ಘೋಷಣೆಗೆ ತಾನೇ ಬೆಂಬಲಿಸುವ ರೀತಿ ವರ್ತಿಸಿದ್ದಾನೆ.

RELATED ARTICLES

ಪ್ರಮುಖ ಸುದ್ದಿಗಳು

Recent Comments