Coastal

ಬಂಟ್ವಾಳ: ಕಾರು ಟ್ಯಾಂಕರ್ ಅಪಘಾತ; ಗಂಭೀರ ಗಾಯಗೊಂಡ ಮಡಂತ್ಯಾರಿನ ಕ್ಯಾಟರಿಂಗ್ ಉದ್ಯಮಿ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಚಂಡ್ತಿಮಾರ್ ಎಂಬಲ್ಲಿ ಬಿ.ಸಿ.ರೋಡು ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.

ರೋಶನ್ ಸೆರಾವೋ ಅವರು ಮಡಂತ್ಯಾರಿನಲ್ಲಿ ಕೀರ್ತಿ ಕ್ಯಾಟರಿಂಗ್ ಸಂಸ್ಥೆಯನ್ನು ನಡೆಸುತ್ತಿದ್ದರು. ಪೆಟ್ರೋಲ್ ಟ್ಯಾಂಕರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರೋಶನ್ ಸೆರಾವೊ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ರೋಶನ್ ಸೆರಾವೊ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ರೋಷನ್ ಅವರ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.

ಸುದ್ದಿಯನ್ನು ನೇರವಾಗಿ ಪಡೆಯಲು, ನಮ್ಮ ವಾಟ್ಸಾಪ್ ಗುಂಪು ಸೇರಲು ಇಲ್ಲಿ ಕ್ಲಿಕ್ ಮಾಡಿ :
https://chat.whatsapp.com/CMUDdTXoFVn7atm3zHYGrd

Exit mobile version