
ಬಂಟ್ವಾಳ: ಹಗಲಿನಲ್ಲಿಯೇ ಮನೆಯೊಂದಕ್ಕೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯಮಠ ಎಂಬಲ್ಲಿ ನಡೆದಿದೆ.
ಬಂಟ್ವಾಳ ಬಿಸಿರೋಡ್ ನಚಿಕ್ಕಯ್ಯಮಠ ನಿವಾಸಿ ಸತೀಶ್ ಎಂಬವರ ಮನೆಯಿಂದ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ನಡೆದಿದೆ. ಮನೆಯ ಮುಂಬಾಗಿಲ ಚಿಲಕ ಮುರಿದು ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಸುಮಾರು 4.60 ಮೌಲ್ಯದ 11.5 ಪವನ್ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಮನೆಯ ಮಾಲಕ ಸತೀಶ್ ಅವರ ಪತ್ನಿ ಸಂಧ್ಯಾ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪತಿ ಪತ್ನಿ ಇಬ್ಬರೂ ಕೆಲ್ಸಕ್ಕೆ ತೆರಳಿ ಸಂಜೆ 6 ಗಂಟೆಯ ಸುಮಾರಿಗೆ ವಾಪಸಾದಾಗ ಕಳವು ನಡೆದ ಬಗ್ಗೆ ತಿಳಿದುಬಂದಿದೆ.