
ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ರಸ್ತೆಯ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಭಾನುವಾರ ನಡೆದಿದೆ.
ಹೊಸ ಕ್ಯಾಲೆಂಡರ್ ವರ್ಷದ ಆರಂಭದ ದಿನವೇ ಈ ಭೀಕರ ಅಪಘಾತ ನಡೆದಿದ್ದು ಅಪಘಾತದಲ್ಲಿ ಮೂಡಬಿದ್ರೆಯ ಗಂಜಿಮಠ ಸುರಲ್ಪಾಡಿ ನಿವಾಸಿ ಸಾಮಾಜಿಕ ಹಾಗು ಮುಸ್ಲಿಂ ಧಾರ್ಮಿಕ ಮುಖಂಡ ನೌಷದ್ ಹಾಜಿ (47) ಮತ್ತು ಕಾರು ಚಾಲಕ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದ್ದಾರೆ.

ನೌಶಾದ್ ಅವರು ಪ್ರಯಾಣಿಸುತ್ತಿದ್ದ ಇನೋವಾ ಕಾರು ಮತ್ತು ಖಾಸಗಿ ಬಸ್ಸು ನಡುವೆ ಈ ಅವಘಡ ಸಂಭವಿಸಿದೆ. ಅಪಘಾತದ ತೀವೃತೆಗೆ ಇನ್ನೋವಾ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮುಸ್ಲಿಂ ಧಾರ್ಮಿಕ ಮುಖಂಡ ನೌಷದ್ ಹಾಜಿ ಸಾವಿಗೆ ಜಿಲ್ಲೆಯ ಮುಸ್ಲಿಂ ಸಮುದಾಯ ಕಂಬನಿ ಮಿಡಿದಿದೆ.












































