Coastal

ಗುಡುಗು ಸಹಿತ ಮಳೆ: ದಕ್ಷಿಣ ಕನ್ನಡದ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿಯಿಂದ ಭಾರೀ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗು ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಮಂಗಳೂರು, ಬಂಟ್ವಾಳ, ಉಳ್ಳಾಲ, ಮುಲ್ಕಿ, ಮೂಡಬಿದ್ರೆ ತಾಲೂಕಿನ ಶಾಲೆಗಳಿಗೆ ಇದು ಅನ್ವಯವಾಗುತ್ತದೆ.

ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ಅಲ್ಲಿನ ತಹಶೀಲ್ದಾರರು ಪರಿಸ್ಥಿತಿ ನೋಡಿ ರಜೆ ಬಗ್ಗೆ ನಿರ್ಧರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

Exit mobile version