Coastal

ಕಾರ್ಕಳ: ಮಾರುತಿ ಓಮಿನಿ ಕಾರಿನೊಳಗೆ ಕುಳಿತು ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ಮಾರುತಿ ಓಮಿನಿ ಕಾರಿನೊಳಗೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿಯಾಗಿರುವ ಕೃಷ್ಣ ಸಫಲಿಗ (46 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಕೃಷ್ಣ ಸಫಲಿಗ ತನ್ನ ಮಾರುತಿ ವ್ಯಾನ್ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಸಫಲಿಗ ಅವರು ಸ್ವಲ್ಪ ಮಟ್ಟಿನ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನೆ ನಡೆದ ಸ್ಥಳದಲ್ಲಿ ಕೃಷ್ಣ ಸಫಲಿಗ ಅವರು ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಕೂಡ ಸಿಕ್ಕಿದೆ. ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

Exit mobile version