HomeCoastalಮಂಗಳೂರು: 518ಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ, ಪೊಲೀಸರಿಂದ ವಿಚಾರಣೆ

ಮಂಗಳೂರು: 518ಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ, ಪೊಲೀಸರಿಂದ ವಿಚಾರಣೆ

ಮಂಗಳೂರು: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರರ ಆದೇಶದನ್ವಯ ಮಂಗಳೂರು ಪೊಲೀಸರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಆಘಾತಕಾರಿ ಬೆಳವಣಿಗೆಯಲ್ಲಿ ಸರಿಯಾದ ದಾಖಲೆಗಳಿಲ್ಲದ ವಿದೇಶಿ ವಲಸಿಗರೆಂದು ಪರಿಗಣಿಸಲ್ಪಟ್ಟ (ಬಾಂಗ್ಲಾ ವಲಸಿಗರು) 518 ಮಂದಿ ಮಂಗಳೂರಲ್ಲಿ ನೆಲೆಸಿರುವುದು ಪತ್ತೆಯಾಗಿದೆ. ಈ ಎಲ್ಲರನ್ನು ಇದೀಗ ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಕಳೆದ ಒಂದು ವಾರದಿಂದ ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಅಕ್ರಮವಾಗಿ ‌ನೆಲೆಸಿರುವ ವಿದೇಶಿಯರ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸರು ನಡೆಸುತ್ತಿದ್ದಾರೆ. ಇದೀಗ ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ಕೊನೆಗೆ ದಾಖಲೆ ಇಲ್ಲದ 518 ಮಂದಿ ದೊರಕಿದ್ದಾರೆ ಎನ್ನಲಾಗಿದೆ. ಮಂಗಳೂರು ಜಿಲ್ಲೆಯೊಂದರಲ್ಲೇ ಇಷ್ಟು ಸಂಖ್ಯೆಯ ಅಕ್ರಮ ವಲಸಿಗರು ಇದ್ದಾರೆ ಎಂದರೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಇನ್ನೆಷ್ಟು ಮಂದಿ ಇರಬೇಡ ಗುಮಾನಿ ಎದ್ದಿದೆ.

ಮಂಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಟ್ಟ ಒಟ್ಟು 18 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ನೆಲೆಸಿರುವ 4 ಸಾವಿರ ಅನ್ಯ ರಾಜ್ಯದ ವಲಸಿಗರನ್ನು ಗುರುತಿಸಲಾಗಿದೆ. ಇದರಲ್ಲಿ ಸೂಕ್ತ ದಾಖಲೆಗಳು ಇಲ್ಲದ 518 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನ ರೊಸಾರಿಯೋ ಹಾಲ್​ನಲ್ಲಿ ಈ ವಿಚಾರಣೆ ನಡೆಸಲಾಗುತ್ತಿದೆ.

ಮಂಗಳೂರಿನಲ್ಲಿ ನೆಲೆಸಿರುವ ಇವರಲ್ಲಿ ಹಲವರು ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಒಡಿಶಾ , ಸಿಕ್ಕೀಂ ಮೂಲದವರೆಂದು ಹೇಳುತ್ತಿದ್ದು, ಈ ಬಗ್ಗೆ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಜತೆಗೆ ಅವರುಗಳ ಮೊಬೈಲ್, ಗೂಗಲ್ ಮ್ಯಾಪ್​​ ವಿಳಾಸ, ಸಂಬಂಧಿಕರ ಹಾಗು ಸ್ನೇಹಿತರ ದೃಢೀಕರಣ ‌ಮೊದಲಾದ 20 ಅಂಶಗಳನ್ನು ಇಟ್ಟುಕೊಂಡು ವಲಸಿಗರ ವಿಚಾರಣೆ ನಡೆಸಲಾಗುತ್ತಿದೆ‌ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments