Coastal

ತೊಕ್ಕೊಟ್ಟು: ಲಾರಿ ಚಾಲಕ ಹನೀಫನ ನಿರ್ಲಕ್ಷಕ್ಕೆ ಎರಡು ಜೀವ ಬಲಿ, ಇಬ್ಬರು ಮಕ್ಕಳು ಗಂಭೀರ

ಮಂಗಳೂರು: ಲಾರಿ ಚಾಲಕನೋರ್ವನ ಬೇಜವಾಬ್ದಾರಿಯ ಚಾಲನೆಯಿಂದ ಲಾರಿಯು ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು , ಇಬ್ಬರು ಮಕ್ಕಳು ಗಂಭೀರ ಗಾಯಗೊಂಡು ಜೀವ ಮರಣದ ನಡುವೆ ಆಸ್ಪತ್ರೆಯಲ್ಲಿ ಒದ್ದಾಡುತ್ತಿದ್ದಾರೆ. ಮಂಗಳೂರು ಹೊರವಲಯದ ಕಲ್ಲಾಪುವಿನಲ್ಲಿ ಈ ಘಟನೆ ನಡೆದಿದೆ. ಲಾರಿ ಚಾಲಕ ಹನೀಫ್ ನನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೃತರನ್ನು ಗಂಗಾಧರ (45), ಪತ್ನಿ ನೇತ್ರಾವತಿ (48) ಎಂದು ಗುರುತಿಸಲಾಗಿದ್ದು, ನೇತ್ರಾವತಿ ಅವರ ಮಗಳು ಮೋಕ್ಷ (4)ಹಾಗೂ ನೇತ್ರಾವತಿಯವರ ಅಕ್ಕನ ಮಗ ಜ್ಞಾನೇಶ್ (6) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಾಲ್ವರು ಪಂಪ್‌ವೆಲ್‌ನಿಂದ ತೊಕ್ಕೊಟ್ಟು ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಂಡಾ ಡಿಯೋ ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ಅತೀ ವೇಗವಾಗಿ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದು ಗಂಗಾಧರ್ ಹಾಗೂ ನೇತ್ರಾವತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಲಾರಿ ಚಾಲಕನ ಅಜಾರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದ್ದು ಚಾಲಕ ಹನೀಫ್ ನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

Exit mobile version