HomeCoastalಬೈಕಂಪಾಡಿ ರಿವೇಂಜ್ ಮರ್ಡರ್ ಆರೋಪಿಗಳ ಮೇಲೆ ಮುಲ್ಕಿಯಲ್ಲಿ ಪೊಲೀಸ್ ಫೈರಿಂಗ್

ಬೈಕಂಪಾಡಿ ರಿವೇಂಜ್ ಮರ್ಡರ್ ಆರೋಪಿಗಳ ಮೇಲೆ ಮುಲ್ಕಿಯಲ್ಲಿ ಪೊಲೀಸ್ ಫೈರಿಂಗ್

ಮಂಗಳೂರು: ಬೈಕಂಪಾಡಿಯಲ್ಲಿ ಇತ್ತೀಚಿಗೆ ನಡೆದ ರೌಡಿ ಶೀಟರ್ ರಾಜ ಅಲಿಯಾಸ್ ರಾಘವೇಂದ್ರ ಬಂಗೇರ ಕೊಲೆ ಆರೋಪಿಗಳನ್ನು ಬಂಧಿಸಲು ಮಂಗಳೂರು ಸಿಸಿಬಿ ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಕಾರಣ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಇಂದು ಬೆಳಗ್ಗೆ ಆರೋಪಿಗಳ ಇರುವಿಕೆಯನ್ನು ಖಚಿತಪಡಿಸಿಕೊಂಡು ಮುಲ್ಕಿಗೆ ತೆರಳಿದ್ದ ಮಾನಗಳೂರು ಸಿಸಿಬಿ ತಂಡ ಆರೋಪಿಗಳನ್ನು ಬಂಧಿಸಲು ಮುಂದಾದಾಗ ಆರೋಪಿಗಳು ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದರು. ಈ ಸಂದರ್ಭ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು. ಆಗ ಆರೋಪಿಗಳ ಕಾಲಿಗೂ ಗುಂಡು ತಾಗಿದೆ.

ಫೈರಿಂಗ್ ನಡೆಸಿ ಕೊಲೆ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಹಾಗು ಮನೋಜ್ ಅಲಿಯಾಸ್ ಬಿಂದಾಸ್ ಮನೋಜ್ ನನ್ನ ಬಂಧಿಸಲಾಗಿದೆ. ಘಟನೆಯಲ್ಲಿ ಪೊಲೀಸರಿಗೆ ಕೂಡ ಗಾಯಗಳಾಗಿದ್ದು, ಪೊಲೀಸ್ ವಾಹನದ ಮುಂದಿನ ಗಾಜು ಹಾನಿಗೊಳಗಾಗಿದೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments