HomeCoastalಬಿಕರ್ನಕಟ್ಟೆ ಲವ್ ಜಿಹಾದ್: ಮೊಬೈಲ್ ರೀಚಾರ್ಜ್ ಅಂಗಡಿಗೆ ಬರುತ್ತಿದ್ದ ಹಿಂದೂ ಯುವತಿಯನ್ನು ಖೆಡ್ಡಾಕ್ಕೆ ಬೀಳಿಸಿ ಮತಾಂತರ,...

ಬಿಕರ್ನಕಟ್ಟೆ ಲವ್ ಜಿಹಾದ್: ಮೊಬೈಲ್ ರೀಚಾರ್ಜ್ ಅಂಗಡಿಗೆ ಬರುತ್ತಿದ್ದ ಹಿಂದೂ ಯುವತಿಯನ್ನು ಖೆಡ್ಡಾಕ್ಕೆ ಬೀಳಿಸಿ ಮತಾಂತರ, ಲೈಂಗಿಕ ದೌರ್ಜನ್ಯ

ಮಂಗಳೂರು: ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಹಿಂದೂ ಬಾಲಕಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲು ಯತ್ನಿಸಿದ ಆರೋಪದ ಮೇಲೆ ಮಹಿಳಾ ವೈದ್ಯೆ, ಮೊಬೈಲ್ ಅಂಗಡಿ ಮಾಲೀಕ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತೆ ಶಿವಾನಿ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಿಕರ್ನಕಟ್ಟೆ ಕೈಕಂಬದಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಖಲೀಲ್, ವೈದ್ಯೆ ಡಾ ಜಮೀಲಾ ಮತ್ತು ಐಮನ್ ವಿರುದ್ಧ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಕಾಯ್ದೆ 2022 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ, ಸಂತ್ರಸ್ತೆ ಶಿವಾನಿ ೨೦೨೧ರಲ್ಲಿ ತನ್ನ ಮೊಬೈಲ್ ಫೋನ್ ಅನ್ನು ಖಲೀಲ್ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ರೀಚಾರ್ಜ್ ಮಾಡುತ್ತಿದ್ದಳು. ಆಗ ಖಲೀಲ್ ಅವಳೊಂದಿಗೆ ಸ್ನೇಹ ಬೆಳೆಸಿ ಒಳ್ಳೆಯ ಕೆಲಸ ಮತ್ತು ಸಂಬಳ ನೀಡುವುದಾಗಿ ಆಸೆ ಹುಟ್ಟಿಸಿದ್ದನು. ನಂತರ ಖಲೀಲ್ ಅವಳನ್ನು ತನ್ನ ಸಂಬಂಧಿಕರ ಮನೆಗೆ ಕರೆದೊಯ್ದು ಅಲ್ಲಿ ಅವಳನ್ನು ನಮಾಜ್ ಮಾಡಲು ಮತ್ತು ಕುರಾನ್ ಪಠಿಸಲು ಒತ್ತಾಯಿಸಲಾಯಿತು. ಬಳಿಕ ಆಕೆಯ ಹೆಸರನ್ನು ಆಯಿಷಾ ಎಂದು ಬದಲಾಯಿಸಿದ್ದಾರೆ. ಅಷ್ಟೇ ಅಲ್ಲದೆ ಖಲೀಬ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರುದಾರರು ಪತ್ರದಲ್ಲಿ ತಿಳಿಸಿದ್ದಾರೆ.

ನಂತರ ಆಕೆಯನ್ನು ಹೊಸ ಕೆಲಸಕ್ಕಾಗಿ ಬೇರೆ ಸ್ಥಳಕ್ಕೆ ಕರೆದೊಯ್ಯಲಾಯಿತು. ವೈದ್ಯೆ ಡಾ. ಜಮೀಲಾ ಅವರ ಮನೆಗೆ ಕೆಲಸಕ್ಕೆ ಸೇರಿಸಲಾಯಿತು. ಅಲ್ಲಿ ಆಕೆಗೆ ಬುರ್ಖಾ ಧರಿಸುವಂತೆ ಒತ್ತಾಯಿಸಲಾಯಿತು. ಅದೇ ಸಮಯದಲ್ಲಿ ಐಮಾನ್ ಎಂಬ ವ್ಯಕ್ತಿ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಅವಳನ್ನು ಸಂಪರ್ಕಿಸಿ ಮತ್ತು ತನ್ನೊಂದಿಗೆ ಸಂಬಂಧವನ್ನು ಹೊಂದುವಂತೆ ಒತ್ತಾಯಿಸುತ್ತಿದ್ದ. ಸಂತ್ರಸ್ತೆ ಶಿವಾನಿ ಈಗ ಖಲೀಲ್, ಡಾ ಜಮೀಲಾ ಮತ್ತು ಐಮಾನ್ ವಿರುದ್ಧ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments