
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 317 ಹಾಗು ಉಡುಪಿ ಜಿಲ್ಲೆಯಲ್ಲಿ 309 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಇಂದಿನ ಪ್ರಕರಣಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 1,33,588ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಗುರುವಾರ 623 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1,29,019 ಕ್ಕೆ ತಲುಪಿದೆ. ಪ್ರಸ್ತುತ ಜಿಲ್ಲೆಯಲ್ಲಿ 2,789 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 5 ಮಂದಿ ಕೋವಿಡ್ ನಿಂದಾಗಿ ಸಾವಿಗೀಡಾಗಿದ್ದು ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 1,780 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯಲ್ಲಿ ಗುರುವಾರದ 309 ಹೊಸ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳು 93,977 ಕ್ಕೆ ಏರಿಕೆಯಾಗಿದೆ. 898 ಮಂದಿ ಕಳೆದ ೨೪ ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುರುವಾರ 3 ಮಂದಿ ಕಾವಿಡ್ ರೋಗಿಗಳು ಸಾವಿಗೀಡಾಗಿದ್ದು ಒಟ್ಟು ಸಾವಿನ ಸಂಖ್ಯೆ 506ಕ್ಕೆ ಏರಿದೆ. ಜಿಲ್ಲೆಯಲ್ಲಿ 2,698 ಸಕ್ರಿಯ ಪ್ರಕರಣಗಳಿವೆ.












































