
ಸುಳ್ಯ: ಕೇರಳ ಮೂಲದ ಮಸೂದ್ ಎಂಬಾತನ ಮೇಲೆ ಬೆಳ್ಳಾರೆಯಲ್ಲಿ ಹಲ್ಲೆ ಮಾಡಿ ನಂತರ ಆಸ್ಪತ್ರೆಯಲ್ಲಿ ಸಾವಿಗೀಡಾದ ಪ್ರಕರಣ ಮಾಸುವ ಮುನ್ನವೇ ಬೆಳ್ಳಾರೆ ಮತ್ತೊಂದು ಕೊಲೆಗೆ ಸಾಕ್ಷಿಯಾಗಿದೆ. ಮಂಗಳವಾರ ರಾತ್ರಿ ಬೆಳ್ಳಾರೆ ನೆಟ್ಟಾರು ನಿವಾಸಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಮೇಲೆ ಅಪರಿಚಿತರು ಮಾರಕಾಸ್ತ್ರಗಳಿಂದ ಧಾಳಿ ಮಾಡಿ ಕೊಲೆ ಮಾಡಿದ್ದಾರೆ.
ಮಂಗಳವಾರ ರಾತ್ರಿ 9 ಗಂಟೆಯ ಸುಮಾರಿಗೆ ಬೈಕಿನಲ್ಲಿ ಬಂದ ಅಪರಿಚಿತರು ಪ್ರವೀಣ್ ಮೇಲೆ ಮಾರಕಾಸ್ತ್ರಗಳಿಂದ ಧಾಳಿ ಮಾಡಿ ಗಾಯಗೊಳಿಸಿ ಪರಾರಿಯಾಗಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಪ್ರವೀಣ್ ಕೊನೆಯುಸಿರು ಎಳೆದಿದ್ದಾರೆ. ಪ್ರವೀಣ್ ಅವರು ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಅನ್ನು ನಡೆಸುತ್ತಿದ್ದು ಫಾರ್ಮ್ ಮುಚ್ಚಿ ಮನೆಗೆ ತೆರಳುವ ಸಂದರ್ಭ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಪ್ರವೀಣ್ ಅವರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿ ಸ್ಥಳೀಯವಾಗಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಸಾಮಾಜಿಕ ಹಾಗು ರಾಜಕೀಯವಾಗಿ ಪ್ರವೀಣ್ ನೆಟ್ಟಾರು ಅವರು ಸಕ್ರಿಯರಾಗಿದ್ದರು.
ಇತ್ತೀಚಿಗೆ ಬೆಳ್ಳಾರೆಯಲ್ಲಿ ನಡೆದ ಮಸೂದ್ ಮೇಲಿನ ಹಲ್ಲೆ ಹಾಗು ಕೊಲೆ ಪ್ರಕರಣಕ್ಕೆ ಇದು ಪ್ರತಿಕಾರವಾಗಿ ಮಾಡಿರಬಹುದು ಎನ್ನುವ ಅನುಮಾನ ಸ್ಥಳೀಯರಲ್ಲಿ ಮೂಡಿದೆ. ಮಸೂದ್ ಕೊಲೆಯನ್ನು ರಾಜಕೀಯಗೊಳಿಸಲು ಜಿಲ್ಲೆಯ ಕಾಂಗ್ರೆಸ್ ಹಾಗು ಮುಸ್ಲಿಂ ಮುಖಂಡರು ಯತ್ನಿಸಿದ್ದರು. ಮಸೂದ್ ಶವ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಮುಸ್ಲಿಮರು ಜಮಾಯಿಸಿದ್ದರು.
ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL