
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪುರುಷ ಪ್ರಯಾಣಿಕನಿಂದ 11,78,240 ರೂಪಾಯಿ ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 224 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಭಟ್ಕಳ ಮೂಲದ ವ್ಯಕ್ತಿ ಬುಧವಾರ ಸ್ಪೈಸ್‌ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.












































