HomeCoastalಉಡುಪಿ-ಶಿರ್ವ: ಜುವೆಲ್ಲರಿ ಶಾಪ್‌'ಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಸೆರೆ

ಉಡುಪಿ-ಶಿರ್ವ: ಜುವೆಲ್ಲರಿ ಶಾಪ್‌’ಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಸೆರೆ

ಉಡುಪಿ: ಜುವೆಲ್ಲರಿ ಶಾಪ್‌’ಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಸೆರೆ ಹಿಡಿದಿದ್ದಾರೆ. ಗ್ರಾಹಕರ ಸೋಗಿನಲ್ಲಿ ಜುವೆಲ್ಲರಿ ಶಾಪ್‌ಗೆ ತೆರಳಿ ಈ ತಂಡ ಕಳ್ಳತನ ಮಾಡುತ್ತಿತ್ತು.

ಬಂಧಿತರನ್ನು ತಮಿಳುನಾಡಿನ ದಿಂಡಿಗಲ್‌ ಜಿಲ್ಲೆಯ ಶನಾಬೆಲ್ಲಾ ಬಿ.(45), ಮೊಹಮ್ಮದ್‌ ಆಲಿ (32), ಅಶುರ್‌ ಆಲಿ (32) ಮತ್ತು ಗಣೇಶ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ ರೂ. 1,49,000 ಮೌಲ್ಯದ 28.882 ಗ್ರಾಂ ತೂಕದ ಚಿನ್ನದ ಗಟ್ಟಿ, ರೂ.1,17,000 ಮೌಲ್ಯದ 26 ಗ್ರಾಂ ಚಿನ್ನದ ಗಟ್ಟಿ ಮತ್ತು ಒಂದು ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜೂನ್ 6 ರಂದು ಮಧ್ಯಾಹ್ನ ಮಲೆಯಾಳ ಮತ್ತು ತಮಿಳಿನಲ್ಲಿ ಮಾತನಾಡುತ್ತಿದ್ದ ಅಪರಿಚಿತರಿಬ್ಬರು ಗ್ರಾಹಕರ ಸೋಗಿನಲ್ಲಿ ಶಿರ್ವ ಪೇಟೆಯಲ್ಲಿನ ಆಭರಣದಂಗಡಿಗೆ ಬಂದು 1.49 ಲ.ರೂ ಮೌಲ್ಯದ 28.79 ಗ್ರಾಂ. ಚಿನ್ನದ ನೆಕ್ಲೆಸ್‌ ಕಳವು ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments