Karnataka

ವಿದ್ಯುತ್ ದರ ಏರಿಕೆ ವಿರೋಧಿಸಿ ಈ ಗುರುವಾರ ಕರ್ನಾಟಕ ಬಂದ್

ಬೆಂಗಳೂರು: ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್​​ 22 ರ ಗುರುವಾರ ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ಕೊಟ್ಟಿದೆ.

ಜೂ.10 ರಂದು ಕೆಸಿಸಿಐ ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ನೀಡಿತ್ತು. ದರ ಏರಿಕೆಯನ್ನು ವಾಪಸು ಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿತ್ತು.
ಇದೀಗ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ರಾಜ್ಯ ಬಂದ್ ಗೆ ಕರೆ‌ ನೀಡಿದೆ.

Exit mobile version