HomeKarnatakaಪರೀಕ್ಷೆಗಿಂತ ಹಿಜಾಬ್ ಮೇಲು ಎಂದು ಬಳ್ಳಾರಿಯಲ್ಲಿ 10 ವಿದ್ಯಾರ್ಥಿನಿಯರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗೈರು

ಪರೀಕ್ಷೆಗಿಂತ ಹಿಜಾಬ್ ಮೇಲು ಎಂದು ಬಳ್ಳಾರಿಯಲ್ಲಿ 10 ವಿದ್ಯಾರ್ಥಿನಿಯರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗೈರು

ಬಳ್ಳಾರಿ: ಹಿಜಾಬ್ ನಿಷೇಧಿಸಿದ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ 10 ಮುಸ್ಲಿಂ ವಿದ್ಯಾರ್ಥಿನಿಯರು ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಗೈರಾಗಿದ್ದರು. ಪರೀಕ್ಷೆಗಿಂತಲೂ ಹಿಜಾಬ್ ಮೇಲು ಎಂದು ಆ 10 ಮಂದಿ ಮೊದಲ ದಿನದ ಕನ್ನಡ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.

ಆ 10 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಳ್ಳಾರಿ ಪೂರ್ವ ಬ್ಲಾಕ್‌ನಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು. ಆದರೆ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿದ ಕಾರಣ, ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ವಾಪಸ್ ಮನೆಗೆ ತೆರಳಿದ್ದಾರೆ.

ವಿದ್ಯಾರ್ಥಿಗಳ ತಲೆಯಲ್ಲಿ ವಿದ್ಯೆಯ ಬದಲು ಧರ್ಮಾಂಧತೆ ತುಂಬಿಸಿ ತನ್ನ ಸಮಾಜವನ್ನು ಎತ್ತ ಕೊಂಡೊಯ್ಯಲು ಯೋಜಿಸುತ್ತಿದೆ ಆ ಒಂದು ಕೋಮು ಎಂದು ಯೋಚಿಸುವಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments