Karnataka

ದೆಹಲಿ ರೈತ ಹೋರಾಟದಲ್ಲಿ ಹಗರಣ ಆರೋಪ: ಸ್ಪಷ್ಟನೆ ನೀಡಲು ಬೆಂಗಳೂರಿಗೆ ಬಂದ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ

ಬೆಂಗಳೂರು: ಕೋಡಿಹಳ್ಳಿ ಚಂದ್ರಶೇಖರ್ ರೈತ ನಾಯಕ ಬಯಲಾದ ಬೆನ್ನಲ್ಲೇ ದೆಹಲಿ ರೈತ ಹೋರಾಟದ ಮೇಲೂ ಹಣ ಪಡೆದ ಆರೋಪ ಎದುರಾಗಿತ್ತು. ಹಾಗಾಗಿ ದೆಹಲಿ ರೈತ ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಬೆಂಗಳೂರಿಗೆ ಬಂದು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ.

ಮಸಿ ಎರಚಿದ ಪರಿಣಾಮ ಸುದ್ದಿಗೋಷ್ಠಿ ಅಪೂರ್ಣವಾಗಿದ್ದು ಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ. ಪತ್ರಿಕೆಗೊಷ್ಠಿಯಲ್ಲಿದ್ದ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಹಾಗು ಒಂದು ಗುಂಪು ರಾಕೇಶ್ ಟಿಕಾಯತ್ ಅವರ ಬೆಂಬಲಿಗರ ಮೇಲೆ ಕುರ್ಚಿಗಳಿಂದ ದಾಳಿ ಮಾಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲಿಗರೇ ಮಸಿ ಎಂದು ಅಂದಾಜಿಸಲಾಗಿದೆ.

ಸ್ವತಃ ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗಿಯಾಗಿದ್ದಾರೆ ಎನ್ನಲಾದ ಹಾಗು ಕೋಡಿಹಳ್ಳಿ ಅವರು ಮಾಡಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡುತ್ತಿರುವಾಗ ಟಿಕಾಯತ್ ಮತ್ತು ಸಿಂಗ್ ಮುಖಕ್ಕೆ ಮಸಿ ಎರಚಲಾಗಿದೆ. ನಾವು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಯುತ್ತಿದ್ದಂತೆ ಕೆಲವರು ವಾಗ್ವಾದಕ್ಕಿಳಿದು ಮಸಿ ಎರಚಿದ್ದಾರೆ. ನಂತರ ಅಲ್ಲಿದ್ದ ಕುರ್ಚಿಗಳನ್ನು ಎಳೆದು ಬಿಸಾಡಿದ್ದಾರೆ. ರೈತ ನಾಯಕ ಚಂದ್ರಶೇಖರ್ ಅವರ ಬೆಂಬಲಿಗರು ಈ ಕೃತ್ಯವೆಸಗಿದ್ದಾರೆ ಎಂದು ಟಿಕಾಯತ್ ಆರೋಪಿಸಿದ್ದಾರೆ.

ಸುಮಾರು ಒಂದು ವರ್ಷಕ್ಕೂ ಹೆಚ್ಚು ಕಾಲ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳಲ್ಲಿ ರಾಕೇಶ್​ ಟಿಕಾಯತ್ ನೇತೃತ್ವ ವಹಿಸಿದ್ದರು.

Exit mobile version