
ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ)ಗೆ ರಾಜ್ಯ ಸರ್ಕಾರ ವಹಿಸಿದ್ದು ಈ ಮೂಲಕ ತನ್ನ ಕೈಯಲ್ಲಿ ಕೇಸು ನಡೆಸಲು ಸಾಧ್ಯವಿಲ್ಲ ಎಂದು ಕೈತೊಳೆದುಕೊಂಡಿದೆ.
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಆರ್ಗನೈಸಡ್ ಕ್ರೈಂ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಾಗಿ ನಡೆಯುತ್ತಿದೆ. ಈ ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎಗೆ ಲೆಟರ್ ಬರೆಯೋದಕ್ಕೆ ಹೇಳಿದ್ದೇನೆ. ಪ್ರಕರಣವನ್ನ ಎನ್ಐಎಗೆ ವಹಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಹೇಳಿದರು.
ಎನ್ಐಎಗೆ ವಹಿಸಿರುವುದರಿಂದ ರಾಜ್ಯ ಸರಕಾರ ಯಾವುದೇ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಈಗ ಹೇಳಿರುವ ಯೋಗಿ ಮಾಡೆಲ್ ಕೂಡ ಅಳವಡಿಕೆ ಕೂಡ ಮಾಡಲಾಗುವುದಿಲ್ಲ. ಅಲ್ಲದೆ ಎನ್ಐಎ ವಹಿಸಿಕೊಂಡಿರುವ ಕೇಸುಗಳೆಲ್ಲ ಹೆಚ್ಚಿನವು ತಳಹಿಡಿದು ಕೂತಿವೆ. ಡಿಜೆಹಳ್ಳಿ ಗಲಭೆ ಪ್ರಕರಣ ಇದಕ್ಕೆ ಉತ್ತಮ ಉದಾಹರಣೆ.












































