HomeKarnatakaಪ್ರತಿದಿನ 3000 ಕ್ಯೂಸೆಕ್ ನೀರು: ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ

ಪ್ರತಿದಿನ 3000 ಕ್ಯೂಸೆಕ್ ನೀರು: ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ

ನವದೆಹಲಿ: ಕರ್ನಾಟಕದಲ್ಲಿ ಕಾವೇರಿ ನದಿ ನೀರಿಗಾಗಿ ಪ್ರತಿಭಟನೆ ಬಂದ್ ನಡೆಯುತ್ತಿರುವ ಮಧ್ಯೆಯೇ ಅತ್ತ ದೆಹಲಿಯಲ್ಲಿ ಇಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.

ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವ ಆದೇಶವನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿತ್ತು. ಈ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಇಂದು ಸೂಚಿಸಲಾಗಿದೆ. ಆ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ-CWMA ಎತ್ತಿಹಿಡಿದಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments