HomeKarnatakaಹಿಜಾಬ್ ಮತಾಂಧತೆ: ಕರ್ನಾಟಕದ ಎಲ್ಲಾ ಶಾಲಾ ಕಾಲೇಜುಗಳನ್ನು 3 ದಿನಗಳ ಕಾಲ ಮುಚ್ಚಲು ಬೊಮ್ಮಾಯಿ ಆದೇಶ

ಹಿಜಾಬ್ ಮತಾಂಧತೆ: ಕರ್ನಾಟಕದ ಎಲ್ಲಾ ಶಾಲಾ ಕಾಲೇಜುಗಳನ್ನು 3 ದಿನಗಳ ಕಾಲ ಮುಚ್ಚಲು ಬೊಮ್ಮಾಯಿ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್ ನಿಷೇಧದ ಸುತ್ತ ವಿವಾದ ತೀವ್ರಗೊಳ್ಳುತ್ತಿದ್ದಂತೆ, ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ರಾಜ್ಯ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ನೀಡುವಂತೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

“ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಆಡಳಿತ ಮಂಡಳಿಗಳು ಮತ್ತು ಕರ್ನಾಟಕದ ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ನಾನು ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳವರೆಗೆ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಲು ವಿನಂತಿಸಲಾಗಿದೆ.” ಎಂದು ಬೊಮ್ಮಾಯಿ ಟ್ವೀಟ್ ಮೂಲಕ ಹೇಳಿದ್ದಾರೆ.

ಗಲಭೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, “ಎಲ್ಲಾ ವಿದ್ಯಾರ್ಥಿಗಳು ಶಾಲೆಗಳು ಹಾಗು ಅದರ ಆಡಳಿತವು ಸೂಚಿಸಿದ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡುವವರು ಯಾರು ಎಂಬುದನ್ನು ನಾವು ನೋಡಬೇಕಾಗಿದೆ” ಎಂದು ಹೇಳಿದರು.

ಅಲ್ಲಲ್ಲಿ ಗಲಭೆ, ಅಶ್ರುವಾಯು, ಸೆಕ್ಷನ್ 144:
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ವಿವಾದ ಮಂಗಳವಾರ ತೀವ್ರಗೊಂಡಿದ್ದು ಹಿಂಸಾಚಾರದ ಕಾರಣ ಶಿವಮೊಗ್ಗದಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ವರದಿಗಳ ಪ್ರಕಾರ ಶಿಕಾರಿಪುರದಲ್ಲೂ ಹಿಂಸಾಚಾರ ನಡೆಯುತ್ತಿದೆ. ಹಿಜಾಬ್ ಪರ ಗುಂಪುಗಳು ಜೂನಿಯರ್ ಕಾಲೇಜು ಬಳಿ ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments