ಬೆಂಗಳೂರು: ಕೋರೋನ ರೂಪಾಂತರಿ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಹೊಸ ಮಾರ್ಗ ಸೂಚಿ ಹೊರಡಿಸಿದ್ದು ಅದರಂತೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಧ್ಯಮಕ್ಕೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸಲಹೆ ಸಲಹೆ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ಆದೇಶದಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ರಾಮಲಿಂಗಾರೆಡ್ಡಿ ಮನವಿ ಮಾಡಿದರು.
ಹಾಗೆಯೆ ಕೋವಿಡ್ ಹೆಚ್ಚಿರುವ ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ನಮ್ಮ ವಾಟ್ಸಾಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/CMUDdTXoFVn7atm3zHYGrd