HomeKarnatakaಬೆಂಗಳೂರಿನಲ್ಲಿ ಕೊರೋನಾ ದಿಢೀರ್ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 887 ಸೇರಿ ರಾಜ್ಯದಲ್ಲಿ 968 ಮಂದಿಗೆ ಪಾಸಿಟಿವ್

ಬೆಂಗಳೂರಿನಲ್ಲಿ ಕೊರೋನಾ ದಿಢೀರ್ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 887 ಸೇರಿ ರಾಜ್ಯದಲ್ಲಿ 968 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗಿದ್ದು ಬೆಂಗಳೂರು ನಗರ ಇತ್ತೀಚಿನ ದಿನಗಳಲ್ಲಿಯೇ ಅತೀ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 968 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರಲ್ಲಿ 887 ಪ್ರಕರಣಗಳು ಬೆಂಗಳೂರಿನಲ್ಲಿಯೇ ದಾಖಲಾಗಿವೆ.

ಇಂದಿನ ಪ್ರಕರಣಗಳನ್ನು ಸೇರಿಸಿ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 39,66,420ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40073ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 887 ಮಂದಿಗೆ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,01,302ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 337 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಚೇತರಿಸಿಕೊಂಡವರ ಒಟ್ಟು ಸಂಖ್ಯೆ 39,21,387ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ 4918 ಸಕ್ರಿಯ ಪ್ರಕರಣಗಳಿವೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments