
ಬೆಂಗಳೂರು: ಜಾರಿ ನಿರ್ದೇಶನಾಲಯಯು ಮತ್ತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಶಾಕ್ ನೀಡಿದ್ದು ಗುರುವಾರ ಹೊಸದಾಗಿ ಚಾರ್ಜ್ ಶೀಟ್ ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಇದೇ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ 50 ದಿನಗಳ ಕಾಲ ಕಂಬಿ ಎಣಿಸಿ ಬಂದಿದ್ದ ಡಿಕೆಶಿ ಸದ್ಯಕ್ಕೆ ಜಾಮೀನಿನ ಮೇಲೆ ಹೊರಗಿದ್ದಾರೆ. ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು.
ಹೊಸ ಚಾರ್ಜ್ ಶೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಅವರು ನಾನು ಏನೇ ಬಂದರೂ ಫೇಸ್ ಮಾಡುತ್ತೇನೆ ಎಂದರು. ಇವೆಲ್ಲ ಚುನಾವಣೆಗಾಗಿ ಹಾಗು ರಾಜಕೀಯ ಲಾಭಕ್ಕಾಗಿ ಬಿಜೆಪಿ ನಡೆಸುತ್ತಿರುವ ಷಡ್ಯಂತ್ರ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.