
ಹುಬ್ಬಳ್ಳಿ: ಇಂದು (ಮಂಗಳವಾರ) ಹುಬ್ಬಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಪ್ರಯಾಣಿಕ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ್ದು 26 ಮಂದಿ ಗಾಯಗೊಂಡಿದ್ದಾರೆ.
ಈ ಅಪಘಾತ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ನಲ್ಲಿ ಸಂಭವಿಸಿದ್ದು ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಯಾಣಿಕರನ್ನು ಹೊತ್ತು ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್ ಬಸ್ ಮತ್ತು ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿ ತಾರಿಹಾಳ ಬೈಪಾಸ್ ಸಮೀಪ ಡಿಕ್ಕಿಯಾಗಿತ್ತು.
ಅಪಘಾತದಲ್ಲಿ ಎರಡೂ ವಾಹನಗಳು ನಜ್ಜುಗುಜ್ಜಾಗಿದ್ದು ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಮೃತಪಟ್ಟರೆ, ಪ್ರಯಾಣಿಕ ಬಸ್ನಲ್ಲಿದ್ದ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 7 ಮಂದಿ ಸಾವಿಗೀಡಾಗಿದ್ದಾರೆ.












































