HomeKarnatakaಜನವರಿ 19ರಂದು ಕರ್ನಾಟಕಕ್ಕೆ ಮೋದಿ ಭೇಟಿ: ಪ್ರಧಾನಿಯ ಪೂರ್ಣ ದಿನದ ವೇಳಾಪಟ್ಟಿ ಹೀಗಿದೆ

ಜನವರಿ 19ರಂದು ಕರ್ನಾಟಕಕ್ಕೆ ಮೋದಿ ಭೇಟಿ: ಪ್ರಧಾನಿಯ ಪೂರ್ಣ ದಿನದ ವೇಳಾಪಟ್ಟಿ ಹೀಗಿದೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೇ ಶುಕ್ರವಾರ ಜನವರಿ 19 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಸದ್ಯ ಆಂಧ್ರಪ್ರದೇಶ ಹಾಗು ಕೇರಳ ಪ್ರವಾಸ ಕೈಗೊಂಡಿರುವ ಮೋದಿಯವರು ಬಳಿಕ ದೆಹಲಿಗೆ ತೆರಳಿ ನಂತರ ಕರ್ನಾಟಕಕ್ಕೆ ಬರಲಿದ್ದಾರೆ. ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಹೊರಟು ನೇರವಾಗಿ ಕಲಬುರಗಿಗೆ ತೆರಳಲಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಿಂದ 9.40ಕ್ಕೆ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ. ಬಳಿಕ ಮಧ್ಯಾಹ್ನ 12.10ಕ್ಕೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ಪುನಃ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬರುತ್ತಾರೆ.

1.05ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿರುವ ಪ್ರಧಾನಿ ನರೇಂದ್ರ ಮೋದಿ 2.15ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಬೆಳೆಸುತ್ತಾರೆ. 2.45ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿರುವ ಪ್ರಧಾನಿ ಮೋದಿ, ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.45ಕ್ಕೆ ಭಟ್ಟರ ಮಾರನಹಳ್ಳಿಯಿಂದ ನಿರ್ಗಮಿಸಿ, 3.55ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ತೆರಳಲಿದ್ದಾರೆ.

ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ರೋಡ್​ ಶೋ ಕೂಡ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ತೀರ್ಮಾನ ಆಗಿಲ್ಲ. ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಸಮಾಲೋಚನೆ ನಡೆಸಿದ್ದು, ಪ್ರಧಾನಿ ಕಾರ್ಯಾಲಯದಿಂದ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

ಪ್ರಮುಖ ಸುದ್ದಿಗಳು

Recent Comments