HomeKarnatakaಇಂದಿನಿಂದ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಸರ್ಕಾರದ ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ?

ಇಂದಿನಿಂದ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಸರ್ಕಾರದ ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ?

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಹಾಗಾಗಿ ಇಂದಿನಿಂದ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಕೋವಿಡ್ ಮೂರನೇ ಅಲೆಯ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆ ಕಂಡು ಬಂದಿದೆ. ಗುರುವಾರ ರಾಜ್ಯದಲ್ಲಿ 471 ಪ್ರಕರಣಗಳು ಹಾಗೂ ಕೋರೋನ ಪಾಸಿಟಿವ್ ರೇಟ್ ಶೇ. 2.14ರಷ್ಟು ವರದಿಯಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿದ ಹೊಸ ಮಾರ್ಗ ಸೂಚಿ ಈ ರೀತಿ ಇದೆ;

  1. ಸಾರ್ವಜನಿಕವಾಗಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಸಲಾಗಿದೆ. ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು.
  2. ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆಫೆಟೀರಿಯಾ, ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು.
  3. ಯಾವುದೇ ರೀತಿಯ ವಾಹನಗಳಲ್ಲಿ ಸಂಚರಿಸುವಾಗ (ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ( ಬಸ್‌ ಹಾಗೂ ರೈಲು)) ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.
  4. ಬೂಸ್ಟರ್ ಡೋಸ್ ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು.
  5. ಅಸ್ತಮಾ, ಸಾರಿ ಲಕ್ಷಣಗಳನ್ನು ಹೊಂದಿದವರು ಹಾಗು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.
RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments