Karnataka

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ 4, ಕಾಂಗ್ರೆಸ್ 2, ಜೆಡಿಎಸ್ ಒಬ್ಬರು ಸೇರಿ 7 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ಚುನಾವಣೆ ನಡೆಯುವ ಅಗತ್ಯ ಇಲ್ಲದೆ ಆಯ್ಕೆಯಾಗುವಂತಾಗಿದೆ.

ಇಂದು ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿತ್ತು. ಆದರೆ, ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದ್ದು ಎಲ್ಲರೂ ಅವಿರೋಧ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ.

ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕೇಶವ ಪ್ರಸಾದ್, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಆಯ್ಕೆಯಾದರೆ ಜೆಡಿಎಸ್ ನಿಂದ ಟಿ ಎ ಶರವಣ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು, ನಮ್ಮ ವಾಟ್ಸಾಪ್ ಗುಂಪು ಸೇರಲು ಇಲ್ಲಿ ಕ್ಲಿಕ್ ಮಾಡಿ :
https://chat.whatsapp.com/CMUDdTXoFVn7atm3zHYGrd

Exit mobile version