
ಬೆಂಗಳೂರು: ನಾಳೆಯಿಂದ ನಂದಿನಿ ಹಾಲು ಮೊಸರಿನ ದರ ತುಟ್ಟಿಯಾಗಲಿದೆ. ರೈತರಿಗೆ ಪ್ರೋತ್ಸಾಹದನವಾಗಿ ನೀಡುವ ಸಲುವಾಗಿ ನಂದಿನ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಟೋನ್ಡ್ ಹಾಲಿನ ದರ ಲೀಟರಿಗೆ 37 ರಿಂದ 40 ರುಪಾಯಿಗೆ ಹೆಚ್ಚಳ ಮಾಡಲಾಗಿದೆ. ಇನ್ನು ಸ್ಪೆಷಲ್ ಹಾಲಿನ ದರ 43 ರಿಂದ 46 ರೂಪಾಯಿಗೆ, ಸಮೃದ್ಧಿ ಹಾಲಿನ ದರ 48 ರಿಂದ 51 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಹೋಮೋಜಿನೈಸ್ಡ್ ಹಾಲು 38 ರೂ. ರಿಂದ 41 ರೂ.ಗೆ ಏರಿಕೆ ಮಾಡಿದ್ದರೆ, ಹೊಮೊಜಿನೈಸ್ಡ್ ಹಸುವಿನ ಹಾಲು 42 ರೂ. ರಿಂದ 45 ರೂ.ಗೆ ಏರಿಕೆಯಾಗಿದೆ.
ಶುಭಂ ಹಾಲು 43 ರೂ. ರಿಂದ 46 ರೂ.ಗೆ ಏರಿಕೆ ಮಾಡಲಾಗಿದೆ. ಹೊಮೊಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು 44 ರೂ. ರಿಂದ 47 ರೂ.ಗೆ ಏರಿಕೆಯಾಗಿದೆ. ಸಂತೃಪ್ತಿ ಹಾಲು 50 ರೂ. ರಿಂದ 53 ರೂ.ಗೆ ಏರಿಕೆಯಾಗಿದ್ದರೆ, ಡಬಲ್ ಟೋನ್ಡ್ ಹಾಲು 36 ರೂ. ರಿಂದ 39 ರೂ.ಗೆ ಏರಿಕೆಯಾಗಿದೆ. ಉಳಿದಂತೆ ಒಂದು ಲೀಟರ್ ಮೊಸರಿನ ದರವನ್ನು 45 ರಿಂದ 48 ರೂಪಾಯಿಗೆ ಏರಿಕೆ ಮಾಡಲಾಗಿದೆ.
ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL