HomeKarnatakaಚಿರತೆ ಧಾಳಿಗೆ ಡಿಗ್ರಿ ವಿದ್ಯಾರ್ಥಿನಿ ಬಲಿ: 20ಕ್ಕೂ ಅಧಿಕ ಚಿರತೆ ಸೆರೆ ಬಳಿಕವೂ ನಿಂತಿಲ್ಲ ಚಿರತೆ...

ಚಿರತೆ ಧಾಳಿಗೆ ಡಿಗ್ರಿ ವಿದ್ಯಾರ್ಥಿನಿ ಬಲಿ: 20ಕ್ಕೂ ಅಧಿಕ ಚಿರತೆ ಸೆರೆ ಬಳಿಕವೂ ನಿಂತಿಲ್ಲ ಚಿರತೆ ಕಾಟ

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಚಿರತೆ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ತಿ.ನರಸೀಪುರ ತಾಲೂಕಿನ ಎಸ್. ಕೆಬ್ಬೆಹುಂಡಿ ಗ್ರಾಮದ ಡಿಗ್ರಿ ವಿದ್ಯಾರ್ಥಿನಿಯೊಬ್ಬರು ಚಿರತೆ ದಾಳಿಗೆ ಗುರುವಾರ ಬಲಿಯಾಗಿದ್ದಾರೆ.

ತಿ.ನರಸೀಪುರ ಸರಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ಮೇಘನಾ ಚಿರತೆ ದಾಳಿಗೆ ಮೃತಪಟ್ಟ ಯುವತಿ. ಗುರುವಾರ ಸಂಜೆ ಮನೆ ಹಿತ್ತಲಲ್ಲಿದ್ದ ಶೌಚಾಲಯಕ್ಕೆ ಹೋಗಲು ಹೊರ ಬಂದ ಮೇಘನಾ ಮೇಲೆ ಅಚಾನಕ್ಕಾಗಿ ಚಿರತೆ ದಾಳಿ ಮಾಡಿದೆ. ಮೇಘನಾರ ಮುಖ ಹಾಗೂ ಕತ್ತಿನ ಭಾಗವನ್ನು ಕಚ್ಚಿ ಗಾಯಗೊಳಿಸಿದೆ. ಮೇಘನಾ ಚೀರಾಟದ ಕೂಗಿಗೆ ಪೋಷಕರು ಓಡಿಬಂದಿದ್ದಾರೆ. ತಕ್ಷಣ ಚಿರತೆ ಪರಾರಿಯಾಗಿದೆ. ಮೇಘನಾ ಅವರನ್ನು ತಕ್ಷಣ ನಗರದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 20ಕ್ಕೂ ಹೆಚ್ಚು ಚಿರತೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಆದರೂ ಇನ್ನೂ ಚಿರತೆಗಳು ಇದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಘಟನೆ ಖಂಡಿಸಿ ಗ್ರಾಮಸ್ಥರು ಧರಣಿ ನಡೆಸಿದರು.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments